BengaluruPolitics

ರಾಜ್ಯ ಬಿಜೆಪಿ ನಾಯಕರಲ್ಲಿ ಯಾವುದೇ ಗೊಂದಲಗಳಿಲ್ಲ; ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು; ರಾಜ್ಯ ಬಿಜೆಪಿ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರೋದು ನಮ್ಮ ಅಜೆಂಡಾ ಅಂತ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಕಡೆಗಣನೆ ಸುದ್ದಿ ಬಗ್ಗೆ ಮಾತನಾಡಿದ ಅವರು, ಈ ರೀತಿಯಾಗಿ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮಾಧ್ಯಮ ಸ್ನೇಹಿತರು ಅಂತಹ ಯಾವುದೇ ಭಿನ್ನಮತಗಳನ್ನು ಸೃಷ್ಟಿ ಮಾಡೋದಕ್ಕೆ ಹೋಗಬೇಡಿ ಅಂತ ಕಿವಿ ಮಾತು ಹೇಳಿದರು.

ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮತ್ತೆ ಅಧಿಕಾರಕ್ಕೆ ಬರೋದೇ ನಮ್ಮೆಲ್ಲರ ಅಜೆಂಡಾ ಎಂದು ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.

Share Post