ಜನವರಿ 1ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಡಿ.ಕೆ.ಶಿವಕುಮಾರ್
ಬೆಳಗಾವಿ; 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಚುನಾವಣಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು,ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆ ಸಂಬಂಧ ಬೆಳಗಾವಿಯಲ್ಲಿ ಮೊದಲ ಸಭೆ ಮಾಡಲಾಗಿದೆ ಎಂದು ಡಿಕೆಶಿ, ಈ ಬಗ್ಗೆ ಎರಡೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಒಟ್ಟು 1,350 ಮಂದಿ ಟಿಕೆಟ್ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಲ್ಲಿಕೆಯಾದ ಅರ್ಜಿಗಳ ಪಟ್ಟಿಯನ್ನು ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಕಳುಹಿಸಲಾಗುತ್ತದೆ. ಅವರು ಸ್ಥಳೀಯ ಮಟ್ಟದಲ್ಲಿ ಚರ್ಚೆ ಮಾಡಿ, ಗರಿಷ್ಠ ಮೂರು ಹೆಸರುಗಳನ್ನು ಆಯ್ಕೆ ಮಾಡಿ ಕಳುಹಿಸುತ್ತಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.