Districts

ಎಲ್ಲರೂ ಬೂಸ್ಟರ್ ಡೋಸ್ ಪಡೆಯಿರಿ; ಸಚಿವ ಸುಧಾಕರ್ ಕರೆ

ಬೆಳಗಾವಿ; ಕೊವಿಡ್ ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಆದಷ್ಟು ಬೇಗ ಎಲ್ಲರೂ ಮೂರನೇ ಡೋಸ್ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕರೆ ಕೊಟ್ಟಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕೆಲ ತಿಂಗಳಿಂದ ಕೊವಿಡ್ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜನರು ಬೂಸ್ಟರ್ ಡೋಸ್ ಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಈಗಾಲಾದರೂ ಎಲ್ಲರೂ ಬೂಸ್ಟರ್ ಡೋಸ್ ಲಸಿಕೆ ಪಡೆಯಲಿ ಎಂದು ಸುಧಾಕರ್ ಹೇಳಿದರು.

  ಇನ್ನು ಕೊವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್ ರೋಗಿಗಳಿಗಾಗಿ ಬೆಡ್ ಗಳನ್ನು ಮೀಸಲಿರಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆಗೆ ಬೆಡ್ ಮೀಸಲಿತಿಸಲಾಗಿದೆ ಎಂದು ಸಚಿವ ಸುಧಾಕರ್ ಹೇಳಿದರು.

Share Post