ಪ್ರಧಾನಿ ನರೇಂದ್ರ ಮೋದಿ ತಾಯಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಅವರಿಗೆ ಅನಾರೋಗ್ಯವುಂಟಾಗಿದೆ. ಕಳೆದ ಕೆಲ ತಿಂಗಳ ಹಿಂದೆ ನೂರನೇ ವರ್ಷದ ಜನ್ಮ ದಿನ ಆಚರಿಸಿಕೊಂಡಿದ್ದ ಹೀರಾ ಬೆನ್ ಅವರು, ವಯೋಸಹಜ ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಅಹಮದಾಬಾದ್ನ ಖಾಸಗಿ ಆಸ್ಪತ್ರೆಗೆ ಹೀರಾ ಬೆನ್ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯಷ್ಟೇ ಮೋದಿಯವರ ಸಹೋದರ ಪ್ರಹ್ಲಾದ್ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಇದರ ಬೆನ್ನಲ್ಲೇ ಅವರ ತಾಯಿ ಹೀರಾ ಬೆನ್ ಅನಾರೋಗ್ಯಕ್ಕೀಡಾಗಿದ್ದಾರೆ.