ಅಪಘಾತದಲ್ಲಿ ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ಗೆ ಗಂಭೀರ ಗಾಯ
ಡೆಹ್ರಾಡೂನ್; ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಾಖಂಡದಿಂದ ದೆಹಲಿಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೆಹಲಿಯ ಖಾಸಗಿ ಆಸ್ಪತದ್ರೆಗೆ ದಾಖಲಿಸಲಾಗಿದೆ. ಪ್ಲಾಸ್ಟಿಕ್ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ಹೇಳಲಾಗುತ್ತಿದೆ. ರಿಷಬ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ರಿಷಬ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ರಿಷಭ್ ಪಂತ್ ಅವರ ಹಣೆಯ ಭಾಗ, ಬೆನ್ನು, ಕಾಲಿಗೆ ಗಂಭೀರ ಪೆಟ್ಟಾಗಿದೆ.