BengaluruCrime

ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಪ್ರಕರಣ; ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಎಫ್‌ಐಆರ್‌

ಬೆಂಗಳೂರು; ನಿನ್ನೆ ಉದ್ಯಮಿಯೊಬ್ಬ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಆತ್ಮಹತ್ಯೆಗೂ ಮುನ್ನ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಮಂದಿ ವಿರುದ್ಧ ಆರೋಪ ಮಾಡಿ ಡೆತ್‌ ನೋಟ್‌ ಬರೆದಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಕಗ್ಗಲೀಪುರ ಪೊಲೀಸರು ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದಾರೆ.

ಐಪಿಸಿ ಸೆಕ್ಷನ್ 306ರಡಿ ಎಫ್​ಐಆರ್ ದಾಖಲಾಗಿದೆ. ಉದ್ಯಮಿ ಪ್ರದೀಪ್ ಪತ್ನಿ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.   ಅರವಿಂದ ಲಿಂಬಾವಳಿ, ಜಿ.ರಮೇಶ್‌ ರೆಡ್ಡಿ, ಕೆ.ಗೋಪಿ‌, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರನ್ನು ಪ್ರದೀಪ್‌ ಡೆತ್‌ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಹೀಗಾಗಿ ಎಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಹೆಚ್‌ಎಸ್‌ಆರ್ ಲೇಔಟ್‌ ನಿವಾಸಿ ಪ್ರದೀಪ್ ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಈ ಘಟನೆ ನಡೆದಿತ್ತು. ಹಣಕಾಸು ವಿಚಾರದಲ್ಲಿ ಪ್ರದೀಪ್‌ಗೆ ಕೆಲವರು ಮೋಸ ಮಾಡಿದ್ದು, ಅವರಿಗೆ ಅರವಿಂದ್‌ ಲಿಂಬಾವಳಿ ಬೆಂಬಲಿಸಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಲಾಗಿತ್ತು.

Share Post