ಅಪರಿಚಿತರಿಂದ ರೈಲಿನ ಮೇಲೆ ಕಲ್ಲು ತೂರಾಟ
ಕೋಲ್ಕತ್ತಾ; ಅಪರಿಚಿತರು ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲು ಹೊಡೆದಿದ್ದಾರೆ. ಇದ್ರಿಂದ ವಂದೇ ಭಾರತ್ ಎಕ್ಸ್ಪ್ರೆಸ್ನ ಕಿಟಕಿ ಗಾಜುಗಳು ಒಡೆದಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ. ಮಾಲ್ಡಾ ಸ್ಟೇಷನ್ ಬಳಿ ಈ ಘಟನೆ ನಡೆದಿದೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ರೈಲ್ವೇ ಕಾಯ್ದೆ u/s 154 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಶ್ಚಿಮ ಬಂಗಾಳ ಡಿಸೆಂಬರ್ 30 ರಂದು ತನ್ನ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಸ್ವಾಗತಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೌರಾ ಮತ್ತು ನ್ಯೂ ಜಲ್ಪೈಗುರಿ (NJP) ನಡುವಿನ ಸೆಮಿ-ಹೈ-ಸ್ಪೀಡ್ ರೈಲಿಗೆ ಫ್ಲ್ಯಾಗ್ ಆಫ್ ಮಾಡಿದರು.