ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆ; ಡಿ.ಕೆ.ಶಿವಕುಮಾರ್
ಬೆಂಗಳೂರು; ಕಾರ್ಯರ್ತರ ಅಭಿಪ್ರಾಯ ಪಡೆದು ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳ ಘೋಷಣೆಗೆ ಮುಹೂರ್ತ ಕೂಡಿಬರಬೇಕು ಎಂದು ಹೇಳಿದ್ದಾರೆ.
ಜಿಲ್ಲಾ ಕಮಿಟಿಗಳಿಂದ ವರದಿ ಕೇಳಿದ್ದೇವೆ. ಜಿಲ್ಲಾ ಕೇಂದ್ರಗಳಲ್ಲಿ ಈಗಾಗಲೇ ಸಭೆಗಳನ್ನು ನಡೆಸಿ ಅಭಿಪ್ರಾಯಗಳನ್ನು ಸಂಗ್ರಹ ಮಾಡಲಾಗಿದೆ. ಜಿಲ್ಲಾ ಕೇಂದ್ರಗಳಿಂದ ವರದಿ ಬಂದ ಬಳಿಕ, ನಾನೂ ಕೂಡಾ ಸಮೀಕ್ಷೆ ನಡೆಸುತ್ತೇವೆ. ಅನಂತರ ಕಾರ್ಯಕರ್ತರಿಂದಲೂ ಮತ್ತೊಮ್ಮೆ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಅನಂತರ ಅಭ್ಯರ್ಥಿ ಹೆಸರುಗಳನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.