BengaluruPolitics

ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಕರೆಸಲು ತೀರ್ಮಾನ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ರಾಜ್ಯದಲ್ಲಿ ಮಹಿಳಾ ಕಾಂಗ್ರೆಸ್‌ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಅದಕ್ಕೆ ಪ್ರಿಯಾಂಕಾ ಗಾಂಧಿಯವರನ್ನು ಕರೆಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರಿಯೂ ಪ್ರಾತಿನಿದ್ಯ ನೀಡಲು ತೀರ್ಮಾನಿಸಿದ್ದೇವೆ. ಹೀಗಾಗಿ, ಪ್ರಿಯಾಂಕಾ ಗಾಂಧಿಯವರನ್ನು ಕರೆಸಿ ಮಹಿಳಾ ಕಾರ್ಯಕ್ರಮ ನಡಸೆಸಲಾಗುತ್ತದೆ ಎಂದು ಹೇಳಿದರು.

ನಮ್ಮ ನಾಯಕಿಯರ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದೇವೆ. ಪ್ರಿಯಾಂಕಾ ಗಾಂಧಿ ಕೂಡಾ ಉತ್ತರ ಪ್ರದೇಶದಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಆಹ್ನಾನ ನೀಡುತ್ತೇನೆ. ಅವರು ಏನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದ್ದಾರೆ.

Share Post