ಇಂದಿನಿಂದ ಮೈಸೂರಿನಲ್ಲಿ ಎಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ
ಮೈಸೂರು; ಮೈಸೂರಿಲ್ಲಿಂದು ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಬೃಹತ್ ಸಭೆ ನಡೆಯಲಿದೆ. ಹಳೇ ಮೈಸೂರು ಪ್ರಾಂತ್ಯದ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ದಲಿತ ಮತಗಳನ್ನು ಪಡೆಯುವುದಕ್ಕಾಗಿ ಈ ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತದೆ.
ಚಿತ್ರಗುರ್ಗದಲ್ಲಿ ಇಂದು ಕಾಂಗ್ರೆಸ್ ಸಮಾವೇಶ ನಡೆಯುತ್ತಿದೆ. ಇದೇ ವೇಳೆ ಇತ್ತ ಸಿದ್ದು ತವರೂರಲ್ಲಿ ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಸ್ಕೆಚ್ ಹಾಕಿದೆ. ಕೇಂದ್ರ ಸಚಿವ ಅಮಿತ್ ಷಾ ಬಂದು ಹೋದ ಬಳಿಕ ರಾಜ್ಯ ನಾಯಕರು ಫುಲ್ ಆಕ್ಟಿವ್ ಆಗಿದ್ದು, ಸಭೆಗಳ ಮೇಲೆ ಸಭೆಗಳನ್ನು ನಡೆಸುತ್ತಿದ್ದಾರೆ.
ಮೀಸಲು ಕ್ಷೇತ್ರಗಳ ಜೊತೆ ಇತರೆ ಕ್ಷೇತ್ರಗಳಲ್ಲೂ ದಲಿತ ಮತ ಸೆಳೆಯಲು ಪ್ಲ್ಯಾನ್ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾ ಅಧ್ಯಕ್ಷ ಲಾಲ್ ಸಿಂಗ್ ಆರ್ಯ ನೇತೃತ್ವದಲ್ಲಿ ನಡೆಯಲಿದೆ. ನಗರದ ಲಲಿತ ಮಹಲ್ ಹೋಟೆಲ್ ನಲ್ಲಿ ಮೂರು ದಿನಗಳ ಕಾಲ ಈ ಸಭೆ ನಡೆಯಲಿದೆ.
ಸಭೆಯಲ್ಲಿ ಎಲ್ಲಾ ರಾಜ್ಯಗಳ ಎಸ್ಸಿ ಮೋರ್ಚಾದ ಅಧ್ಯಕ್ಷರುಗಳು ಭಾಗಿಯಾಗಲಿದ್ದಾರೆ. ಎರಡನೇ ದಿನದ ಸಭೆಯಲ್ಲಿ ಸಿಎಂ ಬೊಮ್ಮಾಯಿ, BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾಗಿಯಾಗಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಭಾಗಿ.
ರಾಜ್ಯದ ಬಿಜೆಪಿ ಸಂಸದರು, ಸಚಿವರುಗಳು, ಶಾಸಕರು ವಿಧಾನಪರಿಷತ್ ಸದಸ್ಯರುಗಳು ಭಾಗಿಯಾಗುತ್ತಿದ್ದಾರೆ.