BengaluruPolitics

ಜನವರಿ 16ಕ್ಕೆ ಕಾಂಗ್ರೆಸ್‌ ಮಹಿಳಾ ಸಮಾವೇಶ; ಪ್ರಿಯಾಂಕಾರಿಂದ ಉದ್ಘಾಟನೆ

ಬೆಂಗಳೂರು; ಜನವರಿ 16ರಂದು ರಾಜ್ಯ ಕಾಂಗ್ರೆಸ್‌ ಮಹಿಳಾ ಸಮಾವೇಶ ನಡೆಯಲಿದ್ದು, ಈ ಸಮಾವೇಶವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಈ ಬಾರಿ ಮಹಿಳೆಯರಿಗೂ ಆದ್ಯತೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳಾ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಪ್ರಿಯಾಂಕಾ ಗಾಂಧಿಯವರು ಬಂದು ಸಮಾವೇಶವನ್ನು ಉದ್ಘಾಟನೆ ಮಾಡಿದರೆ ಮಹಿಳೆಯರಿಗೆ ಮತ್ತಷ್ಟು ಹುರುಪು ಬರಲಿದೆ. ಹೀಗಾಗಿ ಪ್ರಿಯಾಂಕಾ ಗಾಂಧಿಯವರಿಗೆ ಮನವಿ ಮಾಡಲಾಗಿದೆ ಎಂದು ಡಿಕೆಶಿ ತಿಳಿಸಿದರು.

Share Post