ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಚಿಕ್ಕಮಗಳೂರು; ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲು ಮಾಡಾಲಾಗಿದೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಲಕ್ಷ್ಮಣ್ ವಿರುದ್ದ ಮಾನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.
ಸಿ.ಟಿ ರವಿ ಅಕ್ರಮವಾಗಿ ಸಾವಿರಾರು ಕೋಟಿ ರೂ. ಆಸ್ತಿ ಸಂಪಾದಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರಾರಾದ ಲಕ್ಷ್ಮಣ್ ಗುರುತರ ಆರೋಪ ಮಾಡಿದ್ದರು.ಇದಕ್ಕೆ ಪ್ರತಿಯಾಗಿ ಸಿ ಟಿ ರವಿ ಲಕ್ಷ್ಮಣ್ ವಿರುದ್ದ ಚಿಕ್ಕಮಗಳೂರು ನಗರದ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ತೆರಳಿದ್ದ ಸಿ.ಟಿ.ರವಿ ಲಕ್ಷ್ಮಣ್ ತಮ್ಮ ಮೇಲೆ ಇಲ್ಲ ಸಲ್ಲದ ಸುಳ್ಳು ಆರೋಪ ಹೊರಿಸಿ ಮಾನನಷ್ಟ ಮಾಡಿದ್ದಾರೆ ಹಾಗೂ ನನ್ನ ಸಾಮಾಜಿಕ ಜೀವನಕ್ಕೆ ದಕ್ಕೆ ತಂದಿದ್ದಾರೆ ಎಂದು ಬಿನ್ನಹಮಾಡಿದ್ದಾರೆ .ಪ್ರಕರಣ ದಾಖಲಿಸಿಕೊಂಡ ನ್ಯಾಯಾಲಯ ಇದೇ ಜ.21 ರಂದು ಸಿ.ಟಿ.ರವಿ ಹಾಗೂ ಸಾಕ್ಷಿದಾರರಿಂದ ಹೇಳಿಕೆ ಪಡೆಯಲು ದಿನ ನಿಗದಿ ಮಾಡಿಲಾಗಿದೆ.