ಎಸ್.ಎಂ.ಕೃಷ್ಣಗೆ ಪದ್ಮ ವಿಭೂಷಣ, ಸುಧಾಮೂರ್ತಿ, ಎಸ್.ಎಲ್.ಭೈರಪ್ಪಗೆ ಪದ್ಮಭೂಷಣ
ನವದೆಹಲಿ; ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ಪುರಸ್ಕಾರಗಳಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಎಸ್.ಎಂ.ಕೃಷ್ಣ ಸೇರಿ ರಾಜ್ಯದ ಹಲವರು ಪದ್ಮ ಗೌರವ ಸಿಕ್ಕಿದೆ. ಆರು ಮಂದಿಗೆ ಪದ್ಮ ವಿಭೂಷಣ ನೀಡಲಾಗುತ್ತಿದ್ದು, ಅದರಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಕೂಡಾ ಒಬ್ಬರು.
ಹದಿನೈದು ಮಂದಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕಕ್ಕೆ ಸೇರಿ ಇನ್ಪೋಸಿಸ್ ಫೌಂಡೇಷನ್‌ನ ಸುಧಾಮೂರ್ತಿ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಪದ್ಮಭೂಷಣ ಸಿಕ್ಕಿದೆ.
ಇನ್ನು 106 ಮಂದಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಇದ್ರಲ್ಲಿ ಐವರು ಕನ್ನಡಿಗರೂ ಸೇರಿದ್ದಾರೆ. ಖಾದರ್ ವಲ್ಲಿ ದೂದೇಕುಲ (ವಿಜ್ಞಾನ ಮತ್ತು ಇಂಜಿನಿಯರಿಂಗ್), ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಐ ಶಾ ರಶೀದ್ ಅಹಮದ್ ಕ್ವಾದ್ರಿ (ಕಲೆ), ಸುಬ್ಬರಾಮನ್ (ಪುರಾತತ್ವ ಶಾಸ್ತ್ರ) ಅವರಿಗೆ ಪದ್ಮ ಪ್ರಶಸ್ತಿ ಸಿಕ್ಕಿದೆ.