CrimeDistricts

ಮಧುಗಿರಿ ಪಿಡಬ್ಲ್ಯೂಡಿ ಮ್ಯಾನೇಜರ್ ಆತ್ಮಹತ್ಯೆ

ತುಮಕೂರು; ಮಧುಗಿರಿ ಪಿಡಬ್ಲ್ಯೂಡಿ ಇಲಾಖೆಯ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ.

ಮಧುಗಿರಿಯ ಪಿ. ಡಬ್ಲ್ಯೂ ಡಿ ಇಲಾಖೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿರುವ ಲಕ್ಷ್ಮೀನರಸಿಂಹಯ್ಯ ಎಂಬುವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ನೇಣು ಹಾಕಿ ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ದಾಬಸ್ಪೇಟೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿಗೆ ತುಮಕೂರಿನ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಟಿ ಎನ್ ಪ್ರಸಾದ್ ಎಂಬುವವರು ತುಮಕೂರಿನ ದೇವರಾಯನ ದುರ್ಗದ ಗೆಸ್ಟ್ ಹೌಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು ಈಗ ಅದೇ ಇಲಾಖೆಯ ಮ್ಯಾನೇಜರ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಪೊಲೀಸರ ತನಿಖೆಯ ನಂತರವಷ್ಟೇ ಸತ್ಯ ಹೊರ ಬರಬೇಕಾಗಿದೆ

Share Post