NationalPolitics

ಕಾಶ್ಮೀರದ ಸೌಂದರ್ಯಕ್ಕೆ ಫಿದಾ ಆದ ಡಿ.ಕೆ. ಶಿವಕುಮಾರ್

ಶ್ರೀನಗರ; ರಾಹುಲ್ ಗಾಂಧಿ ಹಮ್ಮಿಕೊಂಡಿದ್ದ ಐತಿಹಾಸಿಕ ಭಾರತ ಜೋಡೋ ಯಾತ್ರೆ ಇಂದು ಮುಕ್ತಾಯವಾಗುತ್ತದೆ. ಕಾಶ್ಮೀರದ ಶ್ರಿನಗರದಲ್ಲಿ ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭ ಏರ್ಪಡಿಸಲಾಗಿದೆ. ಸಮಾರೋಪ ಸಮಾರಂಭಕ್ಕೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ತೆರಳಿದ್ದಾರೆ.

ಈ ಸಂದರ್ಭದಲ್ಲಿ ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಯಾತ್ರೆ ರುವಾರಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಊಟ ಮುಗಿಸಿ ನಮ್ಮ ಕೊಣೆಗೆ ಬಂದು ಮಲಗುವಷ್ಟರಲ್ಲಿ ರಾತ್ರಿ 1 ಗಂಟೆ ಆಗಿತ್ತು. ರಾತ್ರಿ ಇಲ್ಲಿನ ಹವಾಮಾನ 9° ಸೆಲ್ಸಿಯಸ್ ಇತ್ತು. ಬೆಳಗಿನ ಜಾವ 2 ಗಂಟೆ ನಂತರ ಹಿಮ ಸುರಿಯಲು ಆರಂಭವಾಗಿದ್ದು, ಇಡೀ ಪ್ರದೇಶ ಹಿಮದಿಂದ ತುಂಬಿದೆ. ಇಂದು ಬೆಳಗ್ಗೆ ಕೊಠಡಿಯ ಹೊರಗೆ ಬಂದು ನೋಡಿದಾಗ ನನ್ನ ಜೀವನದಲ್ಲಿ ಎಂದೂ ನೋಡಿರದ ಹಿಮಪಾತ ಹಾಗೂ ಅದರ ಸೌಂದರ್ಯ ಮನಸೂರೆಗೊಂಡಿದೆ. ಧಾರಾಕಾರ ಮಳೆಯಂತೆ ಹಿಮ ಸುರಿಯುತ್ತಿದೆ. ಹಿಂದೆಂದೂ ನಾನು ಈ ರೀತಿಯ ಅದ್ಭುತ ದೃಶ್ಯ ಕಂಡಿರಲಿಲ್ಲ. ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ.ಈ ಕಾಶ್ಮೀರ ದೇಶದ ಆಸ್ತಿ ನಾವು ಇದನ್ನು ಕಾಪಾಡಿಕೊಳ್ಳಬೇಕು. ಈ ಹವಾಮಾನ ಪರಿಸ್ಥಿತಿಯಲ್ಲಿ ನಮ್ಮ ಯೋಧರು ಹೇಗೆ ಗಡಿ ಕಾಯುತ್ತಾರೆ. ಅವರಿಗೆ ಧನ್ಯವಾದಗಳು’ ಎಂದು ಶಿವಕುಮಾರ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

Share Post