ಹವಾಮಾನ ವೈಪರಿತ್ಯ; ಭಾರತ್ ಜೋಡೋ ಸಮಾರೋಪಕ್ಕೆ ಸಿದ್ದು ಗೈರು
ದೆಹಲಿ; ಇಂದು ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ ನಡೆಯುತ್ತಿದೆ. ಇದಕ್ಕೆ ತೆರಳಬೇಕಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಯಲ್ಲೇ ಉಳಿದಿದ್ದಾರೆ. ಶ್ರೀನಗರದಲ್ಲಿ ಹವಾಮಾನ ವೈಪರಿತ್ಯವಿದ್ದಿದ್ದರಿಂದ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. ಬೆಳಗ್ಗೆ 09.15ರ ವಿಮಾನದಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಂದ ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಇದಕ್ಕಾಗಿ ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದರು. ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಆಗಮಿಸಿದ್ದರು.
ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ಶ್ರೀನಗರದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿ, ಶ್ರೀನಗರ ನಡುವಣ ಎಲ್ಲ ವಿಮಾನಗಳ ಹಾರಾಟ ರದ್ದಾಗಿದೆ. ಹಾಗಾಗಿ ಸಿದ್ದರಾಮಯ್ಯ ಅವರ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಾದ್ಯವಾಗುತ್ತಿಲ್ಲ.ಇವರ ಜೊತೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕರಾದ ನಾಗೇಂದ್ರ,ರಾಘವೇಂದ್ರ ಹಿಟ್ನಾಳ್,ಪ್ರಕಾಶ್ ರಾಥೋಡ್,ಮಾಜಿ ಶಾಸಕರಾದ ಅಶೋಕ್ ಪಟ್ಟಣ ಮತ್ತು ಐವಾನ್ ಡಿಸೋಜಾ ಕೂಡ ಇದ್ದರು.