BengaluruPolitics

ಜಾರಕಿಹೊಳಿಯದ್ದು ಹತಾಶೆಯ ಮಾತು; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಅದನ್ನು ವಾಪಸ್‌ ಪಡೆಯೋದಕ್ಕೆ ಆಗುತ್ತಿಲ್ಲವೆಂಬ ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಅವರ ಆರೋಪಗಳ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಅವರ ಮಾತು ಕೇಳಿ ನನಗೆ ಅಯ್ಯೋ ಅನಿಸುತ್ತೆ. ಅವರು ಯಾವ ತನಿಖೆಯಾದರೂ ಮಾಡಿಸಿಕೊಳ್ಳಲಿ. ನಾವು ಯಾರನ್ನೂ ತಡೆದಿಲ್ಲ. ನಾನು ಅವರ ಬಗ್ಗೆ ಹೇಳಿಕೆ ನೀಡುವುದಿಲ್ಲ ಎಂದರು.

ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಜೀವನ ಮುಗಿಸುತ್ತೇನೆ  ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ನಾನು ಅವರಿಗೆ ಶುಭಕೋರುತ್ತೇನೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

 

Share Post