BengaluruCrime

ಇನ್ನೋವಾ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ

ಬೆಂಗಳೂರು; ಬೆಂಗಳೂರಿನ ಮಾಗಡಿ ರಸ್ತೆಯ ಲಕ್ಷ್ಮಿ ಆಸ್ಪತ್ರೆ ಮುಂಭಾಗದಲ್ಲಿ ಇನ್ನೋವಾ ಕಾರಿಗೆ ಟಿಪ್ಪರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಿಂದ ಬಚಾವಾಗಿದ್ದಾರೆ.

ಟಿಪ್ಪರ್ ಲಾರಿ ಗುದ್ದಿದ್ದ ರಭಸಕ್ಕೆ ಇನ್ನೋವಾ ಲೈಟ್ ಕಂಬಕ್ಕೆ  ಡಿಕ್ಕಿಹೊಡೆದಿದೆ. ಲೈಟ್ ಕಂಬ ಇಲ್ಲದಿದ್ರೆ ಪೆಟ್ರೋಲ್ ಬಂಕ್ ಗೆ ಡಿಕ್ಕಿ ಹೊಡೆಯುವ ಸಾಧ್ಯತೆ ಹೆಚ್ಚಾಗಿತ್ತು. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post