ಚೆಕ್ ಬೌನ್ಸ್ ಪ್ರಕರಣ; ಬಿಜೆಪಿ ಶಾಸಕನಿಗೆ 4 ವರ್ಷ ಜೈಲು ಶಿಕ್ಷೆ
ಬೆಂಗಳೂರು: ಹಣಕಾಸು ವ್ಯವಹಾರಕ್ಕೆ ಸಂಬಂದಿಸಿದಂತೆ ಬಿಜೆಪಿ ಶಾಸಕನಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ಶಾಸಕ ಎಂ ಪಿ ಕುಮಾರಸ್ವಾಮಿ ಹೂವಪ್ಪಗೌಡ ಎಂಬುವರಿಗೆ 1,38,65,000 ಹಣವನ್ನ ಸಾಲ ವಾಪಸ್ ಕೊಡಬೇಕಾಗಿತ್ತು, ಹಣ ಕೊಡಲು ಸತಾಯಿಸುತ್ತಿದ್ದ ಕಾರಣಕ್ಕೆ ಬೇಸತ್ತ ಹೂವಪ್ಪ ಗೌಡ ಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾದೀಶರಾದ ಜೆ.ಪ್ರೀತ್ ಅವರು ಎಂ ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಎಂಪಿ ಕುಮಾರಸ್ವಾಮಿ ಹೆಸರಲ್ಲಿ 8 ಕೇಸ್ ಗಳಿದ್ದು ತಲಾ 6 ತಿಂಗಳು ಶಿಕ್ಷೆ ವಿಧಿಸಿ ಆದೇಶ ಮಾಡಲಾಡಗಿದೆ. ಹಣವನ್ನ ತಕ್ಷಣ ಪಾವತಿ ಮಾಡದೆ ಇದ್ದಲ್ಲಿ ಶಾಸಕ ಎಂ ಪಿ ಕುಮಾರಸ್ವಾಮಿ 4 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.