BengaluruEconomyHealth

ರಾಜ್ಯ ಬಜೆಟ್‌ – ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

ಬೆಂಗಳೂರು; ರಾಜ್ಯ ಬಜೆಟ್‌ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ರೋಗಿಗಳ ಸಮ್ಮತಿಯೊಂದಿಗೆ ವೈದ್ಯಕೀಯ ದಾಖಲಾತಿಗಳನ್ನು ಡಿಜಿಟಲೀಕರಣ ಮಾಡುವುದಕ್ಕೆ ತೀರ್ಮಾನ ಮಾಡಲಾಗಿದೆ. ಇದೇ ಅಲ್ಲದೆ ಹಲವು ಆರೋಗ್ಯ ಯೋಜನೆಗಳನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ. ಅದರ ವಿವರಗಳು ಇಲ್ಲಿವೆ..

– ಆರೋಗ್ಯ ದಾಖಲೆಗಳನ್ನು ಒಂದೆಡೆ ಸುರಕ್ಷಿತವಾಗಿ ಕ್ರೂಢೀಕರಿಸಲು ಕ್ರಮ
– ರೋಗಿಗಳ ಸಮ್ಮತಿಯೊಂದಿಗೆ ವೈದ್ಯಕೀಯ ದಾಖಲಾತಿಗಳನ್ನು ಡಿಜಿಟಲೀಕರಣ
– ಇದರಿಂದ ರೋಗಿಗಳ ಮುಂದಿನ ಚಿಕಿತ್ಸೆಗೆ ಸಹಾಯ
– ಜನಸಾಮಾನ್ಯರ ಮೆದುಳಿನ ಆರೋಗ್ಯ ಕಾಪಾಡಲು ನಿಮ್ಹಾನ್ಸ್ ಸಹಯೋಗದೊಂದಿಗೆ ಕರ್ನಾಟಕ ಮೆದುಳು ಆರೋಗ್ಯ ಯೋಜನೆ
– 25 ಕೋಟಿ ರೂ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ಈ ಯೋಜನೆ ವಿಸ್ತರಿಸಲಾಗುವುದು
– ಎಲ್ಲಾ ಜಿಲ್ಲೆಗಳಲ್ಲಿ ಹ್ಯಾಂಡ್​ ಹೋಲ್ಡ್ ಎಕ್ಸ್​​ರೇ ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ
– ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ರೂ. ಅನುದಾನ
– ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ ಯೋಜನೆ
– ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು
– ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು
– ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ

Share Post