BengaluruEconomy

ಕ್ರೀಡೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಬಜೆಟ್‌ನಲ್ಲಿ ಪ್ರೋತ್ಸಾಹ

– ಬೆಂಗಳೂರಿನ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ಕೇಂದ್ರಗಳ ಸ್ಥಾಪನೆ
– ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃಧಿಗೆ ಕ್ರಮ
– ಈ ಕ್ರೀಡಾಂಗಣದಲ್ಲಿ ಮಹಿಳೆಯರು ಮತ್ತು ವಿಶೇಷ ಚೇತನರಿಗೆ ಸೂಕ್ತ ಸೌಕರ್ಯಗಳು
– ಯುವಕರಿಗೆ ಹೊರಂಗಣ ಜಿಮ್​ ಸೌಲಭ್ಯ – ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಅನುದಾನ
– ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟಕ್ಕೆ ಪ್ರೋತ್ಸಾಹ
– ಈ ಕ್ರೀಡೆಗಳನ್ನು ಮಕ್ಕಳಿಗೆ ಪರಿಚಯಿಸಲು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟಗಳ ಆಯೋಜನೆ
– ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
– ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಖಾಸಗಿ ಸಂಸ್ಥೆಗಳಿಗೆ 25 ಲಕ್ಷ ರೂ. ಗಳವರೆಗೆ ಪ್ರೋಯ್ಸಾಹ ಧನ
– ಬಾಸ್ಕೆಟ್ ಬಾಲ್​ ಮತ್ತು ವಾಲಿಬಾಲ್​ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಮೈದಾನ
– ವಿಶೇಷ ತರಬೇತಿ ಕೇಂದ್ರ ನಿರ್ಮಾಣ ಮಾಡುವುದಾಗಿ ಘೋಷಣೆ
– ರಾಜ್ಯ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಯುವಜನರಿಗೆ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಘೋಷಣೆ
– ಒಲಂಪಿಕ್ಸ್ ಮತ್ತು ಇತರ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ
– ಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಂಪಿಕ್​ ಕನಸಿನ ಯೋಜನೆಗೆ ಚಾಲನೆ

Share Post