BengaluruEconomy

ಬಜೆಟ್ ನಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ

ಬೆಂಗಳೂರು; ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದು ಬಗರ್ ಹುಕುಂ ಭೂಮಿ ಮಂಜೂರು ಮಾಡಲು ಬಜೆಟ್ ನಲ್ಲಿ ಭರವಸೆ ನೀಡಿರುವುದು ಸಾಗತಾರ್ಹ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಮಲೆನಾಡು ಪ್ರದೇಶದಲ್ಲಿ, ಕಾಣೆ, ಬಾಣೆ, ಸೊಪ್ಪಿನ ಬೆಟ್ಟ, ಹುಲ್ಲುಬನ್ನಿ ಹಾಗೂ ಸರ್ಕಾರಿ ಬೀಳು, ಒಳಗೊಂಡಂತೆ, ಹಲವಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ, ಸಾವಿರಾರು, ಬಡವರು ಹಾಗೂ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ, ಬಗರ್ ಹುಕುಂ ಜಮೀನನ್ನು, ಮಂಜೂರು ಮಾಡಲು ಮುಖ್ಯಮಂತ್ರಿ ಭರವಸೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ದಶಕಗಳ ಕಾಲದ ಬೇಡಿಕೆಯ ಬಗ್ಗೆ ಸಕಾರಾತ್ಮಕ ವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಬಜೆಟ್ ನಲ್ಲಿ ಸಂಪುಟದ ಉಪ ಸಮಿತಿ ನೀಡುವ ಶಿಫಾರಸುಗಳನ್ನು ಅನುಷ್ಟಾನ ಗೊಳಿಸಲಾಗುವುದು ಎಂದು ತಿಳಿಸಿದ್ದಾರೆ ಎಂದರು.

ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಾವಿರಾರು ಬಡ ಕುಟುಂಬಗಳ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಬಗ್ಗೆ ಹೊಂದಿರುವ ಕನಸನ್ನು ನನಸು ಮಾಡಲು ಮನವಿ ಮಾಡಿದ್ದರು.

Share Post