ಮಠಾಧೀಶರ ಜೊತೆ ಜೆಪಿ ನಡ್ಡಾ ರಹಸ್ಯ ಸಭೆ: ಮಠಾಧಿಪತಿಗಳ ಬೇಡಿಕೆಗಳೇನು..?
ಉಡುಪಿ; ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಮ್ಮುಖದಲ್ಲಿ ನಡೆದ ರಹಸ್ಯ ಸಭೆಯಲ್ಲಿ ಕರಾವಳಿಯ ಸ್ವಾಮೀಜಿಗಳು ರಾಜ್ಯದ ಆಡಳಿತ ನಡೆಸುವ ಸರ್ಕಾರಗಳಿಂದ ಹಲವು ಬೇಡಿಕೆಗಳನ್ನಿಟ್ಟಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸನಾತನ ಧರ್ಮ ಸಂಸ್ಕೃತಿ ಸದ್ವಿಚಾರಗಳಿಗೆ ಸದಾ ಮನ್ನಣೆ ನೀಡಬೇಕು, ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಕ್ರಮ ಕೈಗೊಳ್ಳಬೇಕು. ಸರಕಾರ ತುಳು ಭಾಷೆಗೆ ಸೂಕ್ತ ಮಾನ್ಯತೆ ನೀಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದ್ಯತೆ ನೀಡುವುದು, ಕರಾವಳಿಯ ಸಮೃದ್ಧ ಪ್ರಾಕೃತಿಕ ಮತ್ತು ಸಾಂಸ್ಕೃತಿಕ ಧಾರ್ಮಿಕ ಸಂಪನ್ಮೂಲಗಳಿಗೆ ಹಾನಿಯಾಗಬಾರದು ಎಂದು ಹೇಳಿದ್ದೇವೆ.
ಉದ್ಯಮದ, ಕರಾವಳಿ ಪ್ರಗತಿಗೆ ಯೋಜನೆಗಳನ್ನು ಅನುಷ್ಠಾನಗೊಳಿಸುವುದು, ಕರಾವಳಿ ಯುವಕರ ವಲಸೆಯನ್ನು ತಪ್ಪಿಸಬೇಕು,ದೇಶ ದ್ರೋಹಿ ಮತ್ತು ಉಗ್ರವಾದಿ ಚಟುವಟಿಕೆಗಳನ್ನು ಮಟ್ಟಹಾಕಬೇಕು,ಕರಾವಳಿ ಮಲೆನಾಡು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ರಾಷ್ಟ್ರೀಯ ತನಿಖಾ ದಳದ ವಿಭಾಗವನ್ನು ಶೀಘ್ರ ಆರಂಭಿಸುವುದು,ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಗೆ ತನ್ನಿ ಹಾಗೂ ಗೋಸಂರಕ್ಷಣೆಗೆ ಪೂರಕ ಯೋಜನೆಗಳಿಗೆ ನೆರವು ನೀಡುವುದು,ಭ್ರಷ್ಟಾಚಾರ ಮುಕ್ತ , ಸ್ವಚ್ಛ , ಪಾರದರ್ಶಕ ಆಡಳಿತ ನೀಡುವುದು. ದೇವಸ್ಥಾನಗಳ ಭೂಮಿ ಅತಿಕ್ರಮಣ ತಡೆಗಟ್ಟಲು ಕ್ರಮಕೈಗೊಳ್ಳುವುದು ಸೇರಿದಂತೆ ಹಲವು ಅಪೇಕ್ಷೆಗಳನ್ನ ವ್ಯಕ್ತಪಡಿಸಿದ್ದೇವೆ ಎಂದು ಶ್ರೀಗಳು ಹೇಳಿದ್ದಾರೆ.