BengaluruCrime

ರೋಹಿಣಿ ವಿರುದ್ದ ಹೊಸ ಬಾಂಬ್ ಸಿಡಿಸಿದ ಐಪಿಎಸ್ ಅಧಿಕಾರಿ ಡಿ ರೂಪ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ ರೂಪ ಮೌದ್ಗಿಲ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಫೇಸ್ಬುಕ್ ನಲ್ಲಿ ಫೋಸ್ಟ್ ಮಾಡಿದ್ದು ಆತ್ಮೀಯ ಮಾಧ್ಯಮಗಳೇ, ದಯವಿಟ್ಟು ನಾನು ರೋಹಿಣಿ ಸಿಂಧೂರಿ ವಿರುದ್ಧ ಎತ್ತಿದ ಭ್ರಷ್ಟಾಚಾರದ ವಿಷಯದ ಬಗ್ಗೆ ಗಮನಹರಿಸಿ. ಜನಸಾಮಾನ್ಯರ ಮೇಲೆ ಹೆಚ್ಚು ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಯಾರನ್ನೂ ನಾನು ತಡೆದಿಲ್ಲ. ಅದೇ ರೀತಿ, ಕರ್ನಾಟಕದಲ್ಲಿ ಒಬ್ಬ ಐಎಎಸ್ ಅಧಿಕಾರಿ ಮೃತಪಟ್ಟಿದ್ದಾರೆ, ಹಾಗೂ ತಮಿಳುನಾಡಿನಲ್ಲಿ ಒಬ್ಬ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ, ಕರ್ನಾಟಕದಲ್ಲಿ ಒಬ್ಬ ಐಎಎಸ್ ಪತಿ-ಪತ್ನಿ ಈಗಾಗಲೇ ವಿಚ್ಛೇದನ ಪಡೆದಿದ್ದಾರೆ.

ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ. ನಾವು ಇನ್ನೂ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ನಮ್ಮ ಕುಟುಂಬಕ್ಕೆ ಕಂಟಕಪ್ರಾಯವಾಗುವುವರನ್ನು ದಯವಿಟ್ಟು ಪ್ರಶ್ನಿಸಿ. ಇಲ್ಲದಿದ್ದರೆ ಇನ್ನೂ ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಂತ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲಾ ಮಹಿಳೆಯರಿಗೂ ಹೋರಾಟ ಮಾಡುವ ಶಕ್ತಿ ಇರುವುದಿಲ್ಲ. ದಯವಿಟ್ಟು ಅಂತಹ ಮಹಿಳೆಯರಿಗೆ ಧ್ವನಿಯಾಗಿರಿ. ಭಾರತವು ಕೌಟುಂಬಿಕ ಮೌಲ್ಯಗಳಿಗೆ ಹೆಸರುವಾಸಿಯಾಗಿದೆ. ಅದನ್ನು ಮುಂದುವರಿಸೋಣ. ಧನ್ಯವಾದಗಳು ಎಂದು ರೂಪಾ ಬರೆದಿದ್ದಾರೆ.

ಡಿ. ರೂಪ ಅವರ ಈ ಪೋಸ್ಟ್ ನಲ್ಲಿರುವ ವಿಚಾರಗಳು ಇದೀಗ ಹೊಸ ಚರ್ಚೆಯನ್ನ ಹುಟ್ಟುಹಾಕಿವೆ. ರೋಹಿಣಿ ಸಿಂಧೂರಿ, ರೂಪ ಅವರ ಕೌಟುಂಬಿಕ ಜೀವನಕ್ಕೆ ಎಂಟ್ರಿಯಾಗಿದ್ದಾರ…? ಜೊತೆಗೆ ರೋಹಿಣಿ ಸಿಂಧೂರಿ ತಮ್ಮ ಖಾಸಗಿ ಪೋಟೊಗಳನ್ನ ಡಿ ರೂಪ ಮೌದ್ಗಿಲ್ ಅವರ ಪತಿಯ ನಂಬರಿಗೆ ಕಳುಹಿಸಿದ್ದಾರಾ..? ಇದೆ ವಿಚಾರ ಇಷ್ಟೇಲ್ಲಾ ರಾದ್ದಾಂತಕ್ಕೆ ಕಾರಣವಾಗಿದೆಯಾ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

Share Post