ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಜಗಳ; ಒಂದೇ ಕುಟುಂಬದ ನಾಲ್ವರ ಕೊಲೆ
ಕಾರವಾರ; ಆಸ್ತಿ ವಿವಾದ ಹಿನ್ನೆಲೆಯಲ್ಲಿ ದೊಡ್ಡ ಜಗಳ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಭಟ್ಕಳ ತಾಲ್ಲೂಕಿನ ಹಾಡವಳ್ಳಿ ಗ್ರಾಮದ ಬಳಿ ಈ ಕೃತ್ಯ ಎಸಗಲಾಗಿದೆ.
ನಾಲ್ವರ ತಲೆಗಳನ್ನೂ ಕತ್ತಿಯಿಂದ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಶಂಭು ಭಟ್ (65), ಪತ್ನಿ ಮಾದೇವಿ ಭಟ್, ಮಗ ರಾಜೀವ್ ಭಟ್ (34) ಹಾಗೂ ಮಗನ ಪತ್ನಿ ಕುಸುಮಾ ಭಟ್ (30) ಕೊಲೆಯಾದವರೆಂದು ಗುರುತಿಸಲಾಗಿದೆ. ಕುಸುಮಾ ಭಟ್ ಮಗಳು ಅಂಗವನಾಡಿಗೆ ಹೋಗದ್ದಳು. ಈ ಹಿನ್ನೆಲೆಯಲ್ಲಿ ಪುಟ್ಟ ಮಗು ಬದುಕುಳಿದಿದೆ.