BengaluruPolitics

ಚುನಾವಣಾ ರಾಜಕೀಯಕ್ಕೆ ಬಿಎಸ್‌ವೈ ಗುಡ್‌ಬೈ; ವಿದಾಯ ಭಾಷಣ ಮಾಡಿದ ಮಾಜಿ ಸಿಎಂ

ಬೆಂಗಳೂರು; ಮಾಜಿ ಸಿಎಂ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಇದು ಅವರಿಗೆ ಕೊನೆಯ ಅಧಿವೇಶನವಾಗಿತ್ತು. ಅವರು ಇಂದು ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದರು. 

ಇದು ನನ್ನ ಕೊನೆಯ ಅಧಿವೇಶನ. ನಾನು ಇನ್ನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಮಾತೇ ಇಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾನು ವಿರತವಾಗಿ ಶ್ರಮಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದನಕ್ಕೆ ಆಯ್ಕೆಯಾಗಿ ಬರಬೇಕು. ಅದಕ್ಕೆ ಪುರುಷ ಸದಸ್ಯರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಯಡಿಯೂರಪ್ಪ ಹೇಳಿದರು.

ಶಿಕಾರಿಪುರ ತಾಲೂಕಿನ ಜನರ ಪ್ರೀತಿಗೆ ನಾನು ಚಿರಋಣಿಯಾಗಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಅಂದೇ ಏರ್​ಪೋರ್ಟ್​ ಉದ್ಘಾಟನೆಗೆ ಬರುತ್ತೇನೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇದು ನನಗೆ ಅತ್ಯಂತ ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದು ಹೇಳಿದರು.

Share Post