DistrictsPolitics

ಹಾಸನದಲ್ಲಿ ಸೂರಜ್ ರೇವಣ್ಣ ವಿರುದ್ಧ ಎಚ್.ಡಿ.ರೇವಣ್ಣ ಸ್ಪರ್ಧೆ..!

ರಾಜ್ಯದಲ್ಲಿ ವಿಧಾನಪರಿಷತ್‌ ಚುನಾವಣಾ ಕಾವು ಜೋರಾಗಿದೆ. ಒಟ್ಟು ೨೫ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಡಿಸೆಂಬರ್‌ ೧೦ರಂದು ಮತದಾನ ನಡೆಯಲಿದೆ. ಅಂದಹಾಗೆ, ಈ ಬಾರಿ ಹಾಸನ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಕುತೂಹಲ ಮೂಡಿಸಿದ್ದಾರೆ.

ಹಾಸನ ಕ್ಷೇತ್ರದಲ್ಲಿ ಎಲ್ಲಾ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರ ಜೊತೆಗೆ, ಪಕ್ಷೇತರ ಅಭ್ಯರ್ಥಿಯಾಗಿ ಎಚ್.ಡಿ.ರೇವಣ್ಣ ಎಂಬುವವರು ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಇವರು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅಲ್ಲ. ಮತದಾರರನ್ನು ಗೊಂದಲಕ್ಕೀಡುಮಾಡುವುದಕ್ಕಾಗಿಯೋ ಏನೋ ಎಚ್‌.ಡಿ.ರೇವಣ್ಣ ಎಂಬ ಹೆಸರಿನ ವ್ಯಕ್ತಿ ಕಣಕ್ಕಿಳಿದು ಕುತೂಹಲಕ್ಕೆ ಕಾರಣರಾಗಿದ್ದಾರೆ.

ಹಾಸನ ಜಿಲ್ಲೆಯಿಂದ ಜೆಡಿಎಸ್ ನಿಂದ ಸೂರಜ್ ರೇವಣ್ಣ, ಬಿಜೆಪಿಯಿಂದ ಎಚ್.ಎಂ.ವಿಶ್ವನಾಥ್ ಮತ್ತು ಕಾಂಗ್ರೆಸ್ಸಿನಿಂದ ಎಂ.ಶಂಕರ್ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿಯಾಗಿ ಎಚ್‌.ಡಿ.ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಇವರು ಮೂಲತಃ ಕೃಷಿಕರಾಗಿದ್ದಾರೆ. ದೇವೇಗೌಡರ ಕುಟುಂಬದ ವಿರುದ್ಧ ಪ್ರತಿ ಬಾರಿ ಸ್ಪರ್ಧೆ ಮಾಡಿ ಗಮನ ಸೆಳೆಯುತ್ತಿರುತ್ತಾರೆ. ಈ ಬಾರಿಯೂ ದೇವೇಗೌಡರ ಮೊಮ್ಮಗ ಸೂರಜ್‌ ರೇವಣ್ಣ ವಿರುದ್ಧ ಕಣಕ್ಕಿಳಿದಿದ್ದಾರೆ.

ದೇವೇಗೌಡ್ರ ಕುಟುಂಬದ ವಿರುದ್ದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಳ್ಳುವ ಎಚ್.ಡಿ.ರೇವಣ್ಣ, ೨೦೧೯ರ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು.

Share Post