ಸರ್ಕಾರಕ್ಕೆ ನೀಡಿದ್ದ ಡೆಡ್‌ಲೈನ್ ಅಂತ್ಯ; ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ
ಬೆಂಗಳೂರು; ಏಳನೇ ವೇತನ ಆಯೋಗ ಜಾರಿ ಹಾಗೂ ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ಸರ್ಕಾರಿ ನೌಕರರು ಸರ್ಕಾರದಕ್ಕೆ ಡೆಡ್‌ಲೈನ್ ನೀಡಿದ್ದರು. ಅದು ಇಂದಿಗೆ ಅಂತ್ಯವಾಗಿದೆ. ಹೀಗಾಗಿ ಸರ್ಕಾರಿ ನೌಕರರು ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ನಡೆಸೋದಕ್ಕೆ ಮುಂದಾಗಿದ್ದಾರೆ. ರಾಜ್ಯಾದ್ಯಂತ ಸುಂಆರು ಹತ್ತು ಲಕ್ಷ ಸರ್ಕಾರಿ ನೌಕರರು ಈ ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಸರ್ಕಾರಿ ನೌಕರರ ಮುಷ್ಕರದಿಂದಾಗಿ ನಾಳೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಮುಷ್ಕರ ನಡೆದರೆ ಬಹುತೇಕ ಸರ್ಕಾರಿ ಕಚೇರಿಗಳು ನಾಳೆ ಮುಚ್ಚಲಿದೆ. ಎಲ್ಲಾ ಸರ್ಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಬೀದಿಗಿಳಿಯಲು ನಿರ್ಧಾರ ಮಾಡಿದ್ದಾರೆ. ಬಿಬಿಎಂಪಿ ಎಲ್ಲಾ ನೌಕರರು ಕೂಡಾ ಈ ಮುಷ್ಕರದಲ್ಲಿ ಪಾಲ್ಗೊಲಿದ್ದಾರೆ. ಪೌರಕಾರ್ಮಿಕರು ಕೂಡಾ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬೆಂಗಳೂರಿನಲ್ಲಿ ಕಸ ವಿಲೇವಾರಿ ಆಗೋದಿಲ್ಲ ಎಂದು ಹೇಳಲಾಗುತ್ತಿದೆ. ಜೊತೆಗೆ ವಿದ್ಯುತ್ ಸೇರಿದಂತೆ ಹಲವಾರು ಸೇವೆಗಳಲ್ಲೂ ವ್ಯತ್ಯಯವಾಗುವ ಸಾಧ್ಯತೆ ಇದೆ.
ಇನ್ನು ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಏಳನೇ ವೇತನ ಆಯೋಗ ವರದಿ ಜಾರಿಗೆ ಮಂದ್ಯಂತರ ವರದಿ ಸಿದ್ಧ ಮಾಡಿದ್ದೇವೆ. ಬಜೆಟ್‌ನಲ್ಲಿ ಇದಕ್ಕಾಗಿ ಹಣ ಕೂಡಾ ಮೀಸಲಿರಿಸಿದ್ದೇನೆ. ಏಳನೇ ವೇತನ ಆಯೋಗ ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.