BengaluruEconomy

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ; ಅಧಿಕೃತ ಆದೇಶ ಜಾರಿ

ಬೆಂಗಳೂರು; ಏಳನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರಕ್ಕೆ ಸರ್ಕಾರ ಮಣಿದಿದೆ. ಬೆಳಗ್ಗೆ ಸಿಎಂ ಬೊಮ್ಮಾಯಿ ಹೇಳಿದಂತೆ ವೇತನ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಸರ್ಕಾರಿ ನೌಕಕರಿಗೆ ಮೂಲ ವೇತನದಲ್ಲಿ ಶೇಕಡಾ 17ರಷ್ಟು ವೇತನವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಏಪ್ರಿಲ್‌ 1 ರಿಂದ ಈ ಹೊಸ ಪರಿಷ್ಕೃತ ವೇತನ ಜಾರಿಗೆ ಬರಲಿದೆ ಎಂದು ಹಣಕಾಸು ಇಲಾಖೆ ಅಧೀನ ಕಾರ್ಯದರ್ಶಿ ಜಯಶ್ರೀ ಆದೇಶ ಹೊರಡಿಸಿದ್ದಾರೆ.

ಏಳನೇ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ ಈ ಆದೇಶ ಹೊರಡಿಸಲಾಗಿದೆ. ಸರ್ಕಾರಿ ನೌಕರರು ಹಾಗೂ ಸ್ಥಳೀಯ ಸಂಸ್ಥೆಯ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿ ಬೋಧಕೇತರ ಸಿಬ್ಬಂದಿಗೂ ವೇತನದಲ್ಲಿ ಹೆಚ್ಚಳವಾಗಲಿದೆ. ಇನ್ನು ನಿವೃತ್ತ ನೌಕರರ ಪಿಂಚಣಿಯಲ್ಲೂ ಹೆಚ್ಚಳವಾಗಲಿದೆ. ಸುಮಾರು 15 ಲಕ್ಷ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳವಾಗಲಿದೆ.

ಇನ್ನು ರಾಷ್ಟ್ರೀಯ ಪಿಂಚಣಿ ಯೋಜನೆ ಬದಲಾಗಿ ಹಳೇ ಪಿಂಚಣಿ ಯೋಜನೆ ಜಾರಿಗೆ ಸರ್ಕಾರಿ ನೌಕರರು ಆಗ್ರಹಿಸಿದ್ದರು. ಈ ಸಂಬಂಧ ಸಮಿತಿ ರಚನೆ ಮಾಡಿ ಎರಡು ತಿಂಗಳ ಒಳಗಾಗಿ ವರದಿ ಕೊಡುವಂತೆ ಸೂಚಿಸಿ ಮತ್ತೊಂದು ಆದೇಶ ಹೊರಡಿಸಲಾಗಿದೆ.

Share Post