DistrictsPolitics

ಚುನಾವಣೆ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡಿಲ್ಲ; ಸಂಸದೆ ಸುಮಲತಾ ಅಂಬರೀಶ್‌

ಮಂಡ್ಯ; ನಾನು ಯಾವುದಾದರೂ ರಾಜಕೀಯ ಪಕ್ಷ ಸೇರುವ ಬಗ್ಗೆಯಾಗಲೀ, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆಯಾಗಲೀ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಮಾತನಾಡಿದ ಅವರು, ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕ ಎಂದು ಹೇಳಿದರು.

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಬರಬೇಕೆಂದು ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ಕೊಡಲು ಸುಮಲತಾ ಅವರು ಸುದ್ದಿಗೋಷ್ಠಿ ನಡೆಸಿದರು. ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡೋದು ಸುಲಭ ವಿಚಾರವಲ್ಲ. ಆ ಬಗ್ಗೆ ನಿರ್ಧಾರ ಕೈಗೊಳ್ಳಲು ಕಷ್ಟದ ಕೆಲಸ. ಅನುಕೂಲಕರ ವಾತಾವರಣವಿದೆಯಾ ಎಂಬುದು ಮುಖ್ಯವಾಗುತ್ತದೆ. ಹೀಗಾಗಿ ನಾನು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂಬುದನ್ನು ಹೇಳೋದಕ್ಕೆ ಆಗೋದಿಲ್ಲ ಎಂದು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಪಕ್ಷಗಳು ನನಗೆ ಆಹ್ವಾನ ನೀಡಿವೆ ಎಂದ ಸುಮಲತಾ ಅವರು, ಆದ್ರೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ದಶಪಥ ಹೆದ್ದಾರಿ ಉದ್ಘಾಟನೆ ವೇಳೆ ಸಂಸದೆಯಾಗಿ ಪ್ರಧಾನಮಂತ್ರಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.

Share Post