BengaluruCinema

ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮದಿನ; ಆದಿಚುಂಚನಗಿರಿ ಶ್ರೀಗಳಿಂದ ಆಶೀರ್ವಾದ

ಬೆಂಗಳೂರು; ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಅವರ ಅವಳಿ ಮಕ್ಕಳು ಜನ್ಮದಿನ ಆಚರಿಸಿಕೊಂಡಿದ್ದಾರೆ. ಜನ್ಮದಿನದ ಹಿನ್ನೆಲೆಯಲ್ಲಿ ನಟಿ ಅಮೂಲ್ಯ ದಂಪತಿ ಮಕ್ಕಳನ್ನು ಆದಿಚುಂಚನಗರಿ ಮಠಕ್ಕೆ ಕರೆದೊಯ್ದಿದ್ದರು. ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಅಮೂಲ್ಯ ಹಾಗೂ ಜಗದೀಶ್ ದಂಪತಿಯ ಅವಳಿ ಮಕ್ಕಳಾದ ಅಥರ್ವ್ ಮತ್ತು ಅಧವ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಡೀ ಕುಟುಂಬ ಆದಿಚುಂಚನಗಿರಿ ಮಠಕ್ಕೆ ತೆರಳಿತ್ತು. ಈ ವೇಳೆ ತೆಗೆದ ಫೋಟೋಗಳನ್ನು ಅಮೂಲ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2017ರಲ್ಲಿ ಅಮೂಲ್ಯ ಅವರು ಉದ್ಯಮಿ ಜಗದೀಶ್ ಅವರನ್ನು ಮದುವೆಯಾಗಿದ್ದರು. ಐದು ವರ್ಷಗಳ ನಂತರ ಈ ಜೋಡಿಗೆ ಅವಳಿ ಮಕ್ಕಳು ಜನಿಸಿದ್ದವು.

Share Post