ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ; ಬಿ.ಎಲ್.ದೇವರಾಜು ಕೂಡಾ ʻಕೈʼನತ್ತ..!
ಮಂಡ್ಯ; ಮಂಡ್ಯದಲ್ಲಿ ಕಮಲ ಅರಳಿಸುವ ಬಿಜೆಪಿ ಕನಸು ಭಗ್ನವಾಗುವ ಎಲ್ಲಾ ಲಕ್ಷಣಗಳೂ ಕಾಣ್ತಿವೆ. ಇದ್ದ ಏಕೈಕ ಶಾಸಕ ಕೂಡಾ ಈಗ ಪಕ್ಷಾಂತರ ಮಾಡಲು ಸಜ್ಜಾಗಿದ್ದಾರೆ. ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರೋದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಪ್ರಧಾನಿ ಮೋದಿಯವರು ಮಾರ್ಚ್ 12ಕ್ಕೆ ರಾಜ್ಯಕ್ಕೆ ಬರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾರಾಯಣಗೌಡರು ಪಕ್ಷಾಂತರ ಮಾಡುವ ಸುಳಿವು ನೀಡಿದ್ದಾರೆ. ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವ ಕೊರತೆ ಇದೆ ಎಂದು ಹೇಳಿರುವ ನಾರಾಯಣಗೌಡರು, ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಒತ್ತಾಯ ಇದೆ. ಮಾಧ್ಯಮಗಳ ಮೂಲಕವೇ ನನ್ನ ಯಾವುದೇ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ.
ಇನ್ನೊಂದೆಡೆ ಜೆಡಿಎಸ್‌ಗೂ ಆಘಾತವಾಗುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿವೆ. ಕಳೆದ ಬಾರಿ ನಾರಾಯಣಗೌಡರ ವಿರುದ್ಧ ಜೆಡಿಎಸ್ ಹುರಿಯಾಳಾಗಿದ್ದ ಬಿ.ಎಲ್.ದೇವರಾಜು ಕೂಡಾ ಕಾಂಗ್ರೆಸ್ ಕದ ತಟ್ಟಿದ್ದಾರೆ. ಈ ಬಾರಿ ಮಂಜು ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಬಿ.ಎಲ್.ದೇವರಾಜು ಅವರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.