DistrictsPolitics

ಬಿಜೆಪಿ ಶಾಸಕರ ಪುತ್ರನ ಲಂಚ ಪ್ರಕರಣ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ; ಗುತ್ತಿಗೆದಾರರಿಂದ ನಲವತ್ತು ಪರ್ಸೆಂಟ್‌ ಕಮೀಷನ್‌ ಪಡೆಯಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಆದ್ರೆ ಒಂದೂವರೆ ವರ್ಷವಾದರೂ ಪ್ರಧಾನಿ ಯಾವುದೇ ಕ್ರಮ ಕೈಗೊಂಡಿಲ್ಲ. ಸಿಎಂ ಬೊಮ್ಮಾಯಿಯವರು ದಾಖಲೆ ಕೊಡಿ ಎಂದು ಕೇಳುತ್ತಾರೆ. ಈಗ ನಿಮ್ಮ ಶಾಸಕರ ಪುತ್ರನೇ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ. ಈಗ ಏನು ಕ್ರಮ ಕೈಗೊಳ್ಳುತ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದರಿಂದಾಗಿ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಮಾಡಾಳ್‌ ವಿರೂಪಾಕ್ಷಪ್ಪ ಅವರು ಯಡಿಯೂರಪ್ಪ ಅವರ ಆಪ್ತವಲಯದಲ್ಲಿದ್ದರು. ಬಿಜೆಪಿಗೆ ಕೋಮು ಗಲಭೆ ಮಾಡಿಸಿ ಚುನಾವಣೆ ಗೆಲ್ಲೋದಕ್ಕೆ ಸಾಧ್ಯವಿಲ್ಲ ಎಂದು ಗೊತ್ತಾಗಿದೆ. ಹೀಗಾಗಿ ಕೋಟಿ ಕೋಟಿ ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಇದಕ್ಕಾಗಿ ಹೀಗೆ ಲಂಚ ರೂಪದಲ್ಲಿ ಹಣ ಪಡೆಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

Share Post