ಕೆಎಸ್ಡಿಎಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ
ಬೆಂಗಳೂರು; ಲಂಚ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಮತ್ತೊಮ್ಮೆ ಕೆಎಸ್ಡಿಎಲ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಕೆಎಸ್ಡಿಎಲ್ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮೂರು ದಿನಗಳ ಹಿಂದಷ್ಟೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡಿದ್ದರು. ಈಗ ಮತ್ತೆ ದಾಳಿ ನಡೆಸಿದ್ದಾರೆ. ಟೆಂಡರ್ ಪ್ರಕ್ರಿಯೆ ಸಂಬಂಧ ಅಧಿಕಾರಿಗಳು ದಾಖಲೆಗಳನ್ನು ಹುಡುಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕೆಎಸ್ಡಿಎಲ್ ಅಧ್ಯಕ್ಷರಾಗಿದ್ದರು. ಕೆಎಸ್ಡಿಎಲ್ನಲ್ಲಿ ಟೆಂಡರ್ ನೀಡುವ ಸಂಬಂಧವಾಗಿಯೇ ಅವರ ಪುತ್ರ ನಲವತ್ತು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದರು.