Bengaluru

ಧ್ರುವನಾರಾಯಣ್‌ ನಿಧನ ಹಿನ್ನೆಲೆ; ಇಂದಿನ ಪ್ರಜಾಧ್ವನಿ ಯಾತ್ರೆ ರದ್ದು

ಬೆಂಗಳೂರು; ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯನ್ನು ರದ್ದು ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಈ ವಿಚಾರ ತಿಳಿಸಿದ್ದಾರೆ.

ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಬೇಕಿತ್ತು. ರಾಮನಗರ ವಿಧಾನಸಭಾ ಕ್ಷೇತ್ರದ ಮೂರು ಕಡೆ ಪ್ರಜಾಧ್ವನಿ ಯಾತ್ರೆ ನಡೆಯಬೇಕಿತ್ತು. ಆದ್ರೆ ಧ್ರುವ ನಾರಾಯಣ್‌ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಯಾತ್ರೆ ಕ್ಯಾನ್ಸಲ್‌ ಮಾಡಲಾಗಿದೆ.

Share Post