Bengaluru

ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ; ನೈಟ್ ವಾಚ್‌ಮನ್‌ ಕೂಡ ಹೌದು; ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ನಗರದಲ್ಲಿ ಕರ್ನಾಟಕ ಮಾದ್ಯಮ ಅಕಾಡೆಮಿಯ ಮತ್ತು ವಾರ್ತಾ ಇಲಾಖೆಯ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಪ್ರಶಸ್ತಿ ಸಿಗುವಂತಹದ್ದು ಇನ್ನಷ್ಟು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಲಿ ಅಂತ ಎನ್ನುವುದು ನನ್ನ ಭಾವನೆ. ನೀವು ಒಳ್ಳೆಯ ಕೆಲಸ ಮಾಡಿದ್ದಕ್ಕೆ ಗುರುತಿಸಿರುತ್ತಾರೆ. ಪ್ರಶಸ್ತಿಯ ಪಾವಿತ್ರ್ಯತೆ ಹೇಗೆ ಇದೆ ಎಂದರೆ, ನಿಮ್ಮ ವೃತ್ತಿಧರ್ಮವನ್ನು ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸಬೇಕು ಅಂತ ಎಂದು ಸಿಎಂ ಬೊಮ್ಮಾಯಿ‌ ಅವರು ಹೇಳಿದರು.

ಪತ್ರಿಕೋದ್ಯಮ ಬಹಳ ಹೆಳೆಯ ವೃತ್ತಿ. ವಿಶ್ವದ ನಾಗರಿಕತೆಯ ಬೆಳವಣಿಗೆಯಲ್ಲಿ ಬಹಳ ದೊಡ್ಡ ಪಾತ್ರವಿದೆ. ತಂತ್ರಜ್ಞಾನ ಹೆಚ್ಚಾದಂತೆ ಪತ್ರಿಕೋದ್ಯಮದಲ್ಲಿ ದೊಡ್ಡ ಬದಲಾವಣೆಯಾಗಿದೆ. ಅದರಲ್ಲೂ ವಿಶ್ವಯುದ್ಧ 1 ಮತ್ತು 2 ರ ಬಳಿಕ ಮಷೀನ್ ಮ್ಯಾನುಫ್ಯಾಕ್ಚುರಿಂಗ್ ಮತ್ತು ಪತ್ರಿಕೋದ್ಯಮದಲ್ಲಿ ಬಹಳ ಬದಲಾವಣೆ ಆಗಿದೆ. ವರ್ಡ್ ಆರ್ಡರ್ ಕೂಡ ಬದಲಾವಣೆ ಆಗಿದೆ. ಭಾರತದಲ್ಲಿ ಸ್ವಾತಂತ್ರ್ಯ ‌ಪೂರ್ವದ ಪತ್ರಿಕೋದ್ಯಮ ಹಾಗೂ ಸ್ವಾತಂತ್ರ್ಯ ‌ನಂತರದ ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾರತದ ಪತ್ರಿಕೋದ್ಯಮ ಪಾತ್ರ ಮುಖ್ಯವಾಗಿದೆ. ಅದೊಂದು ಸುವರ್ಣಯುಗ ಎಂದರು.

Share Post