Bengaluru

ನಾಳೆ ವಿದ್ಯುತ್‌ ಉತ್ಪಾದನಾ ಘಟಕಗಳು ಸ್ಥಗಿತ; ಕಾರ್ಖಾನೆಗಳಿಗೆ ತಟ್ಟಲಿದೆ ಮುಷ್ಕರದ ಬಿಸಿ

ಬೆಂಗಳೂರು; ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಮುಷ್ಕರಗಳು ಹೆಚ್ಚಾಗುತ್ತಿವೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಹಲವಾರು ಸಂಘ ಸಂಸ್ಥೆಗಳು ಮುಷ್ಕರದ ಮೂಲಕ ಸರ್ಕಾರದ ಮೇಲೆ ಒತ್ತಡ ತರುತ್ತಿವೆ. ಅದೇ ರೀತಿ ನಾಳೆ ರಾಜ್ಯದ ಎಲ್ಲಾ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ನೌಕರರು ಕೆಲಸ ಸ್ಥಗಿತ ಮಾಡಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಇದರಿಂದಾಗಿ ಕಾರ್ಖಾನೆಗಳು ಸೇರಿ ಹಲವು ಉದ್ಯಮಗಳಿಗೆ ಇದರ ಬಿಸಿ ತಟ್ಟುವ ಸಾಧ್ಯತೆ ಇದೆ. 

ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆ ಈಡೇರುವಂತೆ ಒತ್ತಾಯಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ನೌಕರರೆಲ್ಲಾ ಈ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇವರೆಲ್ಲಾ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಿದರೆ ರಾಜ್ಯದ ಎಲ್ಲಾ ಕಾರ್ಖಾನೆಗಳಿಗೂ ತೊಂದರೆಯಾಗಲಿದೆ. ಎಲ್ಲಾ ಕಾರ್ಖಾನೆಗಳೂ ಬಂದ್‌ ಆಗುವ ಸಾಧ್ಯತೆ ಹೆಚ್ಚಿದೆ.

ಲೈನ್‌ಮ್ಯಾನ್‌ಗಳು, ಎಂಜಿನಿಯರ್‌ಗಳು ಎಲ್ಲರೂ ಈ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸುಮಾರು 60 ಸಾವಿರ ನೌಕರರು ಈ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ. ಶೇ.೪೦ರಷ್ಟು ವೇತನ ಹೆಚ್ಚಿಸಬೇಕು, ಕಳೆದ ವರ್ಷದಿಂದ ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡಬೇಕು, ವಿದ್ಯುತ್‌ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಇವರು ಮುಂದಿಟ್ಟಿದ್ದಾರೆ.

 

Share Post