ಕಿತ್ತುಹೋದ ರಸ್ತೆ ದುರಸ್ತಿ ಗುದ್ದಲಿ ಪೂಜೆಗೆ ಮೋದಿ ಕರೆಸಿ; ಕಾಂಗ್ರೆಸ್ ಲೇವಡಿ
ಬೆಂಗಳೂರು; ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಯಾಗಿ ಇನ್ನೂ ಮೂರು ದಿನ ಕಳೆದಿಲ್ಲ. ಆದ್ರೆ ರಸ್ತೆ ಕಿತ್ತು ಬರುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಸದ ಸಮಜಾಯಿಷಿ ನೀಡಿದ್ದು, ಅದು ಕಿತ್ತುಹೋಗಿಲ್ಲ, ಸರಿ ಮಾಡುತ್ತಿರೋದು ಎಂದು ಟ್ವೀಟ್ ಮಾಡಿದ್ದಾರೆ. ಆದ್ರೆ ಕಾಂಗ್ರೆಸ್ ರಸ್ತೆ ಕಿತ್ತುಹೋಗಿರುವ ಬಗ್ಗೆ ಬಂದಿರುವ ವರದಿಯನ್ನು ಲಗತ್ತಿಸಿ ಟ್ವೀಟ್ ಮಾಡಿದೆ. ಕಿತ್ತುಹೋದ ರಸ್ತೆ ದುರಸ್ತಿ ಕಾಮಗಾರಿ ನಡೆಸಲು ಗುದ್ದಲಿ ಪೂಜೆಗೆ ಪ್ರಧಾನಿ ಮೋದಿಯವರನ್ನು ಕರೆಸಿ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಟ್ವೀಟ್-೧
◆ಕಿತ್ತುಹೋದ ರಸ್ತೆ ದುರಸ್ತಿ ಕಾಮಗಾರಿಯ ಗುದ್ದಲಿ ಪೂಜೆಗೆ ಮತ್ತೊಮ್ಮೆ ಮೋದಿಯನ್ನು ಕರೆಸಿ. ◆ದುರಸ್ತಿಯಾದ ನಂತರ ಉದ್ಘಾಟನೆಗೆ ಇನ್ನೊಮ್ಮೆ ಮೋದಿ ಕರೆಸಿ. ◆ಗುಂಡಿ ಮುಚ್ಚಿದ ಸಂತೋಷಕ್ಕಾಗಿ ಮಗದೊಮ್ಮೆ ಮೋದಿ ಕರೆಸಿ ರೋಡ್ ಶೋ ಮಾಡಿಸಿ. ಆಗಬಹುದೇ @BJP4Karnataka?
ಟ್ವೀಟ್-೨;
ಮಾನ್ಯ ಸಂಸದರೇ, ಯಾರ #KiviMeleHoova ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಅಂದಹಾಗೆ ◆ನ್ಯೂನ್ಯತೆಗಳಿರುವ ರಸ್ತೆಯನ್ನು ತುರತುರಿಯಲ್ಲಿ ಉದ್ಘಾಟಿಸಿದ್ದೇಕೆ? ◆ಇಂತಹ ಹಲವು ನ್ಯೂನ್ಯತೆಗಳಿಗೆ 80 ಅಪಘಾತಗಳಾದವೇ? ◆ನ್ಯೂನ್ಯತೆಯ ರಸ್ತೆಗೆ ಜನ ಟೋಲ್ ನೀಡಬೇಕೆ?