NationalPolitics

ಬಿ.ಎಲ್‌.ಸಂತೋಷ್‌ ಬೇಕಾಗಿದ್ದಾರೆ; ಹೈದರಾಬಾದ್‌ನಲ್ಲಿ ರಾರಾಜಿಸಿದ ಪೋಸ್ಟರ್‌

ಹೈದರಾಬಾದ್‌; ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಬಿಆರ್‌ಎಸ್‌ ನಾಯಕಿ ಕೆ.ಕವಿತಾಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್‌ನಲ್ಲಿ ಬಿಜೆಪಿ ವಿರುದ್ಧ ಹೋರಾಟಗಳು ಶುರುವಾಗಿವೆ. ಇತ್ತೀಚೆಗಷ್ಟೇ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕರು ಉನ್ನತ ಸ್ಥಾನ ಅಲಂಕರಿಸಿರುವ ಪೋಸ್ಟರ್‌ಗಳನ್ನು ಅಂಟಿಸಲಾಗಿತ್ತು. ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರ ಪೋಸ್ಟರ್‌ಗಳು ಎಲ್ಲೆಡೆ ಅಂಟಿಸಲಾಗಿದೆ.

ಪೋಸ್ಟರ್‌ನಲ್ಲಿ ಬಿ.ಎಲ್‌.ಸಂತೋಷ್‌ ಫೋಟೋ ಹಾಕಲಾಗಿದ್ದು, ಶಾಸಕರ ಖರೀದಿ ಪ್ರಕರಣದಲ್ಲಿ ಬೇಕಾಗಿದ್ದಾರೆ ಎಂದು ಬರೆಯಲಾಗಿದೆ. ಅವರನ್ನು ಹುಡುಕಿಕೊಟ್ಟವರಿಗೆ ಮೋದಿಯವರು ಮಾತುಕೊಟ್ಟಿರುವ 15 ಲಕ್ಷ ರೂಪಾಯಿಯನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ಮುದ್ರಿಸಲಾಗಿದೆ.

ಮಾರ್ಚ್‌ 11 ರಂದು ಕವಿತಾ ಅವರು ಇಡಿ ಮುಂದೆ ಹಾಜರಾಗಿ 8 ಗಂಟೆ ವಿಚಾರಣೆ ಎದುರಿಸಿದ್ದರು. ಇನ್ನು ಕವಿತಾ ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂ ಮೊರೆ ಹೋಗಿದ್ದು, ಮಾರ್ಚ್‌ 24ಕ್ಕೆ ಈ ಅರ್ಜಿಯ ವಿಚಾರಣೆ ನಡೆಯಲಿದೆ.

Share Post