ಚುನಾವಣೆ ಘೋಷಣೆಗೂ ಮುನ್ನವೇ ಅಕ್ರಮ; 1.90 ಕೋ. ರೂ. ವಶ..!
ಕಲಬುರಗಿ; ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಅದಕ್ಕೂ ಮೊದಲೇ ಅಕ್ರಮಗಳು ಶುರುವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ 1.90 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿದ್ದ ಚೆಕ್ಪೋಸ್ಟ್ಗಳಲ್ಲಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಸೂಕ್ತ ದಾಖಲೆಗಳಿಲ್ಲದೆ ಹಣವನ್ನು ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆಯಲಾಗಿದೆ ಅಂತ ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ಹೇಳಿದ್ದಾರೆ. ಇಲ್ಲಿನ ಕಮಲಾಪುರ ತಾಲ್ಲೂಕಿನ ಕಿಣ್ಣಿಸಡಕ್ ಚೆಕ್ಪೋಸ್ಟ್ ನಲ್ಲಿ ಅತಿಹೆಚ್ಚು ನಗದನ್ನು ವಶಕ್ಕೆ ಪಡೆಯಲಾಗಿದೆ. ಇಲ್ಲಿ ಬರೋಬ್ಬರಿ 1.40 ಕೋಟಿ ರೂಪಾಯಿ ಸಿಕ್ಕಿದೆ. ಇನ್ನು ಜೇವರ್ಗಿ ಚೆಕ್ಪೋಸ್ಟ್ನಲ್ಲಿ 50 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ.