BengaluruCrime

ಪಂಚಮಸಾಲಿ ಮೀಸಲಾತಿ ವಿಚಾರ; ಚುನಾವಣೆ ಹೊಸ್ತಿಲಲ್ಲಿ ಸರ್ಕಾರಕ್ಕೆ ರಿಲೀಫ್‌

ಬೆಂಗಳೂರು; ಪಂಚಮಸಾಲಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್‌ ತೆರವುಗೊಳಿಸಿದೆ. ೨ಎ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದ್ದರಿಂದಾಗಿ ಹೈಕೋರ್ಟ್‌ ಈ ಆದೇಶ ಹೊರಡಿಸಿದೆ.

ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡಬೇಕೆಂದು ಸಮುದಾಯದ ಮುಖಂಡರು ಆಗ್ರಹಿಸುತ್ತಿದ್ದಾರೆ. ಆದ್ರೆ ಮಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡದಂತೆ ಆದೇಶ ನೀಡಬೇಕೆಂದು ರಾಘವೇಂದ್ರ ಎಂಬುವವರು ಪಿಐಎಲ್‌ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಕೋರ್ಟ್‌ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿತ್ತು. ಆದ್ರೆ ಇದೀಗ ಕೋರ್ಟ್‌ ಇದನ್ನು ತೆರವುಗೊಳಿಸಿದೆ. ಹೀಗಾಗಿ ಪಂಚಮಸಾಲಿಗೆ ೨ಸಿ, ೨ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲದಂತಾಗಿದೆ.

Share Post