NationalPolitics

ರಾಹುಲ್‌ ಅನರ್ಹತೆ ಹಿಂದೆ ಷಡ್ಯಂತ್ರವಿದೆ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ; ರಾಹುಲ್‌ ಗಾಂಧಿಯವರನ್ನು ಸಂಸತ್‌ ಸ್ಥಾನದಿಂದ ಅನರ್ಹಗೊಳಿಸಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್‌ ಗಾಂಧಿ ಅನರ್ಹತೆ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಅವರು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಸತ್ಯ ಹೇಳಿದ್ದಕ್ಕಾಗಿ ರಾಹುಲ್‌ ಸದಸ್ಯತ್ವವನ್ನು ಅನರ್ಹಗೊಳಿಸಿದ್ದಾರೆ. ಇದು ಸರಿಯಲ್ಲ. ನಾವು ಜೈಲಿಗೆ ಹೋಗೋದಕ್ಕೆ ಕೂಡಾ ಸಿದ್ದ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇನ್ನು ಇದೇ ವೇಳೆ ರಾಹುಲ್‌ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ ಸಂಸದರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

Share Post