DistrictsPolitics

ರಾಜ್ಯದಲ್ಲಿ ಮಳೆಹಾನಿ: ವಿಪಕ್ಷಗಳ ಆರೋಪಕ್ಕೆ BSY ಲೇವಡಿ

ಶಿವಮೊಗ್ಗ:  ಮಳೆಹಾನಿ ಕುರಿತು ಪ್ರತಿಪಕ್ಷಗಳ ಆರೋಪಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮನೆಯಲ್ಲಿ ಕುಳಿತು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಭಾರಿ ಮಳೆಯಿಂದಾಗಿ ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಏರ್ಪಟ್ಟಿತ್ತು. ಇದರಿಂದಾಗಿ ಸಾವಿರಾರು ಕೋಟಿ ರೂಪಾಯಿ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಸಚಿವರು ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ೫೦೦ ರಿಂದ ೬೦೦ ಕೋಟಿ ರೂಪಾಯಿ ತಕ್ಷಣ ಪರಿಹಾರವಾಗಿ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ವಿಪಕ್ಷಗಳ ನಾಯಕರು ನಡೆಸುತ್ತಿರುವ ಆರೋಪಗಳು ನಿರಾಧಾರ ಎಂದು ಯಡಿಯೂರಪ್ಪ ಹೇಳಿದರು.

Share Post