BengaluruPolitics

ಗೃಹಸಚಿವರ ತವರಲ್ಲೇ ಮಾಜಿ ಸಿಎಂಗೆ ರಕ್ಷಣೆ ಇಲ್ಲ; ಕಾಂಗ್ರೆಸ್‌

ಬೆಂಗಳೂರು; ನಿನ್ನೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲುತೂರಾಟ ನಡೆದಿತ್ತು. ಇದರ ಹಿಂದೆ ಬಿಜೆಪಿಯವರೇ ಇದ್ದಾರೆ ಎಂಬುದು ಕಾಂಗ್ರೆಸ್‌ ಆರೋಪ. ಗೃಹ ಸಚಿವರ ತವರು ಜಿಲ್ಲೆಯಲ್ಲೇ ಹೀಗೆ ಏಕಾಯ್ತು ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್‌ನಿಂದ ಸರಣಿ ಟ್ವೀಟ್‌ ಮಾಡಲಾಗಿದೆ. ಅದರ ವಿವರ ಈ ಕೆಳಗಿನಂತಿದೆ. 

ಟ್ವೀಟ್‌-೧

BSY ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ದಾರಗಳಲ್ಲಿ ಅವರ ಪಾತ್ರವಿಲ್ಲ, ಆದರೂ ಸರ್ಕಾರದ ಅವಾಂತರಕ್ಕೆ BSY ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. BSY ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ “ಸಂತೋಷ ಕೂಟ”ದ ಕೈವಾಡ ಇರುವುದು ನಿಶ್ಚಿತ.

ಟ್ವೀಟ್‌-೨

ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ. ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು? @JnanendraAraga  ಅವರೇ? ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ? ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ BSYರ ಮನೆ ಮೇಲೆ ದಾಳಿ ಮಾಡಿದ್ದು ಯಾರ “ಸಂತೋಷ”ದ ಕಾರಣಕ್ಕೆ?

ಟ್ವೀಟ್‌-೩

ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಗಳೆಲ್ಲದರ ಬೀಜ ಬಿತ್ತುವುದು ಗೃಹಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಏಕೆ? ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ @JnanendraAraga  ಅವರದ್ದು ಹೊಣೆಗೇಡಿತನವೋ ಅಥವಾ “ಸಂತೋಷ ಕೂಟ”ವನ್ನು ಮೆಚ್ಚಿಸುವ ಷಡ್ಯಂತ್ರವೋ?

Share Post