ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್ ಕಸರತ್ತು; 45 ಕ್ಷೇತ್ರಗಳಿಗೆ ಫೈನಲ್, 55 ಕ್ಷೇತ್ರಗಳಿಗಾಗಿ ಸರ್ಕಸ್
ಬೆಂಗಳೂರು; ಕಾಂಗ್ರೆಸ್ ಪಕ್ಷ ಈಗಾಗಲೇ 124 ಕ್ಷೇತಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಉಳಿದ ನೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಕಸರತ್ತು ಮಾಡುತ್ತಿದ್ದಾರೆ. ಖಾಸಗಿ ರೆಸಾರ್ಟ್ ಒಂದರಲ್ಲಿ ಸ್ಕ್ರೀನಿಂ ಕಮಿಟಿ ಮೀಟಿಂಗ್ ನಡೆಯುತ್ತಿದೆ. ಈಗಾಗಲೇ 45 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗಿದೆಯಂತೆ. ಉಳಿದ 55 ಕ್ಷೇತ್ರಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲು ಚರ್ಚೆ ನಡೆಯುತ್ತಿದೆ.
ಇಂದು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಸಿ ನೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುತ್ತದೆ. ಏಪ್ರಿಲ್ 3 ರಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಅಂತಿಮ ಮುದ್ರೆ ಒತ್ತಲಾಗುತ್ತದೆ. ಅನಂತರ ಏಪ್ರಿಲ್ 5 ರಂದು ಕಾಂಗ್ರೆಸ್ ಅಂತಿಮ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.