BengaluruCrimePolitics

ಚುನಾವಣೆಯಲ್ಲಿ ಹರಿದಾಡುತ್ತಿದೆ ಝಣಝಣ ಕಾಂಚಾಣ; ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು..?

ಬೆಂಗಳೂರು; ನಿನ್ನೆಯಷ್ಟೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ನಿನ್ನೆಯಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಹೀಗಿರುವಾಗಲೇ ರಾಜ್ಯಾದ್ಯಂತ ಚುನಾವಣಾ ಅಕ್ರಮಗಳು ಜೋರಾಗಿ ನಡೆಯುತ್ತಿದೆ. ಮತದಾರರ ಹಂಚಲು ಹಣ, ಉಡುಗೊರೆಗಳನ್ನು ಕೊಂಡೊಯ್ಯುತ್ತಿದ್ದಾಗ ಹಲವರು ಸಿಕ್ಕಿಬಿದ್ದಿದ್ದಾರೆ.

ಬೆಳಗಾವಿಯ ಕಾಗವಾಡ–ಮಿರಜ್‌ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಭಾರಿ ಮೊತ್ತದ ಹಣ ಸಿಕ್ಕಿದೆ. ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 70 ಲಕ್ಷ ರೂಪಾಯಿ ನಗದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರದ ಮೀರಜ್‌ನಿಂದ ಹಣ ತರಲಾಗುತ್ತಿತ್ತು ಎಂದು ತಿಳಿದುಬಂದಿದೆ. ಉಗಾರ ಪಟ್ಟಣಕ್ಕೆ ಈ ಕಾರು ಬರುತ್ತಿತ್ತು ಎನ್ನಲಾಗಿದೆ. ಕಾರಿನಲ್ಲಿದ್ದವರು ಹಣಕ್ಕೆ ಸೂಕ್ತ ದಾಖಲೆ ಕೊಟ್ಟಿಲ್ಲ. ಹೀಗಾಗಿ ಅದನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ದಾವಣಗೆರೆಯಲ್ಲಿ ಸೀರೆ, ದೋಸೆ ಹೆಂಚುಗಳನ್ನು ಹಂಚಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ, ಅವರ ಪುತ್ರ ಎಸ್‌ಎಸ್‌ ಮಲ್ಲಿಕಾರ್ಜುನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಹುಬ್ಬಳ್ಳಿಯಲ್ಲಿ ಆಟೋ ಚಾಲಕರಿಗೆ ಫ್ಯಾನ್‌ಗಳನ್ನು ಹಂಚಲಾಗುತ್ತಿತ್ತು. ಅದನ್ನು ಕೂಡಾ ತಡೆದು, ಫ್ಯಾನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೋಲಾರದಲ್ಲಿ ೧೧.೧೪ ಲಕ್ಷ ಮೌಲದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಇನ್ನೊಂದೆಡೆ ಹಾರೂಗೇರಿ ಚೆಕ್‌ಪೋಸ್ಟ್‌ನಲ್ಲಿ 2.30 ಲಕ್ಷ ರೂಪಾಯಿ ನಗದು, ಯರಗಟ್ಟಿ ಗೋದಾಮಿನಲ್ಲಿದ್ದ 3.5 ಲಕ್ಷ ರೂಪಾಯಿ ಬೆಲೆಬಾಳುವ ಹೊಲಿಗೆ ಯಂತ್ರಗಳನ್ನೂ ವಶಕ್ಕೆ ಪಡೆಯಲಾಗಿದೆ.

Share Post