DistrictsPolitics

ಅರಶಿಣ-ಕುಂಕುಮ ಕಾರ್ಯಕ್ರಮ ಆಯೋಜನೆ; ಜೊಲ್ಲೆ ವಿರುದ್ಧ ಎಫ್‌ಐಆರ್‌

ಚಿಕ್ಕೋಡಿ; ಮೊದಲ ದಿನವೇ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ನಿಪ್ಪಾಣಿ ಕ್ಷೇತ್ರದಲ್ಲಿ ಸಚಿವೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.

ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.  ಈ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಚಿಹ್ನೆ ಹಾಗೂ ಸಂಸದ ಅಣ್ಣಾಸಾಹೇಬ್‌ ಜೊಲ್ಲೆ ಫೋಟೋಗಳನ್ನು ಬಳಸಲಾಗಿತ್ತು.

 

Share Post