CrimeDistricts

ಒಳಮೀಸಲಾತಿಗೆ ವಿರೋಧ; ಶಿಗ್ಗಾಂವಿಯಲ್ಲಿ ಬಂಜಾರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ

ಹಾವೇರಿ;  ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯ ಕರೆನೀಡಿದ್ದ ಪ್ರತಿಭಟನೆ ವೇಳೆ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಈ ಘಟನೆ ನಡೆದಿದೆ. ಸ್ವಾಮೀಜಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಶಿಗ್ಗಾಂವಿ ತಹಶೀಲ್ದಾರ್  ಕಚೇರಿ  ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಂಜಾರ ಸಮುದಾಯದ ಗುಂಡೂರು ಗ್ರಾಮದ ತಿಪ್ಪೇಸ್ವಾಮಿಯವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಅಲ್ಲಿದ್ದವರು ತಕ್ಷಣ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.

 

Share Post