BengaluruCrime

ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಜಮೀರ್‌ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು; ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ಕೋರಿ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಇದರಿಂದಾಗಿ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಸಂಕಷ್ಟ ಎದುರಾಗಿದೆ.

ಎಸಿಬಿಯವರು ಶಾಸಕ ಜಮೀರ್‌ ಅಹ್ಮದ್‌ ವಿರುದ್ಧ ಕೇಸು ದಾಖಲಿಸಿದ್ದರು. ಜಮೀರ್‌ ಅವರು 80 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಆದಾಯ ಮೀರಿ ಅಕ್ರಮವಾಗಿ ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಎಸಿಬಿ ತನಿಖೆ ನಡೆಸುತ್ತಿದೆ. ಆದ್ರೆ ಇದಕ್ಕೆ ಮಧ್ಯಂತರ ತಡೆ ನೀಡಬೇಕೆಂದು ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್‌, ಜಮೀರ್‌ ಅರ್ಜಿಯನ್ನು ವಜಾ ಮಾಡಿದೆ.

Share Post