BengaluruCrime

ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಡಿಕೆಶಿ ವಿರುದ್ಧ ಸಿಬಿಐ ವಿಚಾರಣೆಗೆ ತಡೆ

ಬೆಂಗಳೂರು; ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಏಪ್ರಿಲ್ 13 ರವರೆಗೆ ತಡೆಯಾಜ್ಞೆ ನೀಡಿದೆ.

ರಾಜ್ಯ ಸರ್ಕಾರ ತನಿಖೆಗೆ ಒಪ್ಪಿಗೆ ನೀಡಿದ ನಂತರ 2020 ರ ಅಕ್ಟೋಬರ್‌ನಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಕೇಂದ್ರ ತನಿಖಾ ಸಂಸ್ಥೆ ಪ್ರಕಾರ, ಏಪ್ರಿಲ್ 30, 2018 – ಏಪ್ರಿಲ್ 1, 2023 ರ ನಡುವೆ, ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬ ಸುಮಾರು 74 ಕೋಟಿ ರೂಪಾಯಿಗಳಷ್ಟು ಅಕ್ರಮ ಆಸ್ತಿಯನ್ನು ಹೊಂದಿದೆ ಎಂದು ಆರೋಪಿಸಲಾಗಿದೆ.

ಆದ್ರೆ, ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಅಕ್ರಮವಾಗಿದೆ. ಅದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಡಿ.ಕೆ. ಶಿವಕುಮಾರ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. 2023ರ ಫೆಬ್ರವರಿ 10ರಂದು ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನ್ಯಾಯಾಲಯವು ಏಪ್ರಿಲ್ 13 ರವರೆಗೆ ತಡೆಯಾಜ್ಞೆ ನೀಡಿದೆ.

Share Post